ಈ ಕುರಿತು ಬುಧವಾರ ರಾಜ್ಯಸಭೆಗೆ ಮಾಹಿತಿ ನೀಡಿದ ಕೇಂದ್ರ ಸಚಿವ ನಿತ್ಯಾನಂದ ರಾಯ್, ಹೆಸರು ಬದಲಾವಣೆಗೆ ಸರ್ಕಾರ ಅನುಮತಿಸಿಲ್ಲ. ಮರು ನಾಮಕರಣಕ್ಕೆ ಸಾಂವಿಧಾನಿಕ ತಿದ್ದುಪಡಿ ಅಗತ್ಯ. ಎಲ್ಲ ಅಗತ್ಯ ಅಂಶಗಳನ್ನು ಪರಿಗಣಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಳೆದ ವರ್ಷ ಜು. 26 ರಂದು ಪಶ್ಚಿಮ ಬಂಗಾಳದ ಹೆಸರನ್ನು ಬಾಂಗ್ಲಾ ಎಂದು ಬದಲಾಯಿಸುವ ದೀದಿ ಸರ್ಕಾರ ತೀರ್ಮಾನ ಕೈಗೊಂಡಿತ್ತು. ಈ ನಿರ್ಣಯವನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.