ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಮಿಸ್ಟರ್ ಆನಂದ್ ಸಿಂಗ್ ಅವರು ದಾರಿ ತಪ್ಪಿದ ಮಗ ಆಗಿದ್ದಾರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರು ದಾರಿ ತಪ್ಪಿದ್ದರು. ಆದರೆ ಪಕ್ಷದ ಹಿನ್ನೆಲೆಯಲ್ಲಿ ಅವರು 5 ವರ್ಷ ಶಾಸಕರಾಗಿ ಆಯ್ಕೆಯಾಗಿ ಬಂದಿದ್ದಾರೆ., ಆದ್ದರಿಂದ ಅವರು ಕೂಡಲೇ ಪಕ್ಷಕ್ಕೆ ವಾಪಸ್ ಬರಬೇಕು. ಪಕ್ಷಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ಸಮಾಜದ ಜನರು ನಂಬಿಕೆಗೆ ಹೆಸರಾದವರು. ಆದರೆ ಕೆಲವರು ವಾಲ್ಮೀಕಿ ಸಮಾಜದಿಂದ ಬಂದು ಬ್ಲಾಕ್ ಮೇಲ್ ಮಾಡುತ್ತಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.