ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಆಪರೇಷನ್ ಹಸ್ತ ಮಾಡಬಹುದು. ಹಲವು ಬಿಜೆಪಿ ಶಾಸಕರು ಅವರ ಸಂಪರ್ಕದಲ್ಲಿದ್ದಾರೆ. ಆದರೆ, ಅವರು ಆ ಮಟ್ಟಕ್ಕೆ ಇಳಿಯುತ್ತಿಲ್ಲ ಎಂದು ಗೋಪಾಲಕೃಷ್ಣ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಯಾವುದೇ ಕಾರಣಕ್ಕೂ ಶರಾವತಿಯನ್ನು ಬೆಂಗಳೂರಿಗೆ ಕೊಂಡಯ್ಯಬಾರದು. ನಾನು ಕೂಡ ಹೋರಾಟಗಾರರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ.ಸರ್ಕಾರದ ತೀರ್ಮಾನಕ್ಕೆ ಪರಿಸರವಾದಿಗಳು, ಸೇರಿದಂತೆ ಎಲ್ಲ ವರ್ಗದವರು ವಿರೋಧ ಮಾಡುತ್ತಿದ್ದಾರೆ ಎಂದರು.