ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಮಲಿಂಗ ರೆಡ್ಡಿ ಹಾಗೂ ಅವರ ಪುತ್ರಿ ಸೌಮ್ಯ ರೆಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಕುರಿತು ಪ್ರತಿಕ್ರಿಯೆ ನೀಡಿದರು, ರಾಮಲಿಂಗ ರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಅವರ ಮೇಲೆ ನಂಬಿಕೆ ಮತ್ತು ಆತ್ಮವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಅವರು ರಾಜೀನಾಮೆ ನೀಡುವುದಿಲ್ಲ ಎಂದರು.
ಇನ್ನು ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಸರ್ಕಾರ ಉರುಳಿಸಲು ಬಿಜೆಪಿಯವರು ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ.ಆದರೆ, ಅದು ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ