ಪಕ್ಷಕ್ಕೆ ಡ್ಯಾಮೇಜ್ ಆಗುವಂತಹ ಹೇಳಿಕೆಗಳ್ನು ನೀಡುತ್ತಿದ್ದ ಕಾರಣದಿಂದ ಅವರನ್ನು ಸದ್ಯ ಪಕ್ಷದಿಂದ ಅಮಾನತ್ತು ಮಾಡಲಾಗಿದೆ. ಈಗ ಹೊಸ ವಿಷ್ಯ ಏನಪ್ಪ ಅಂದ್ರೆ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರೋಷನ್ ಬೇಗ್ ಅವರು ಕೂಡ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಈ ಬಗ್ಗೆ ಆಪ್ತರ ಬಳಿ ಮಾತನಾಡಿದ್ದು, ಮುಂದಿನ ತಮ್ಮ ರಾಜಕೀಯ ಜೀವನದ ಬಗ್ಗೆ ಚರ‍್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಹೀಗಾಗಿ ಸದ್ಯ ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಸಾಲಿಗೆ ರೋಷನ್ ಬೇಗ್ ಅವರು ಕೂಡ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದ್ದು, ಅಲ್ಲಿಗೆ ಸಮ್ಮಿಶ್ರ ಸರಕಾರಕ್ಕೆ ಕೊನೆ ಮೊಳೆಯನ್ನು ರೋಷನ್ ಬೇಗ್ ಹೊಡೆಯಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ ಬಹುತೇಕ ಮಂದಿ ಶಾಸಕರು ಈಗಾಗಲೇ ತಮ್ಮ ಪಕ್ಷದ ನಾಯಕರ ವಿರುದ್ದವೇ ಅಸಮಾಧಾನಗೊಂಡಿದ್ದು ಈ ಹಿನ್ನಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.