ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಪೊಲೀಸ್ ಆಯುಕ್ತರನ್ನು ಕರೆಸಿಕೊಂಡು ಅವರ ಜೊತೆಯಲ್ಲೇ ಕೂರಿಸಿಕೊಂಡು ಶಾಸಕರೊಂದಿಗೆ ಮಾತನಾಡುತ್ತೀರಿ ಎನ್ನುವುದಾದರೆ, ಕುದುರೆ ವ್ಯಾಪಾರಕ್ಕೆ ನೀವೇ ಕಾರಣೀಭೂತರು ಎಂದು ಬಿಜೆಪಿ ವಿರುದ್ಧ ಪರಮೇಶ್ವರ್ ಕಿಡಿಕಾರಿದ್ದಾರೆ.
ಟ
ರಾಜ್ಯಪಾಲರೂ ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಆಪರೇಷನ್ ಕಮಲದಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರ ವಿಶೇಷ ವಿಮಾನದ ಮೂಲಕ ಶಾಸಕರನ್ನು ಮುಂಬೈನ ರೆಸಾರ್ಟ್ ಗೆ ಕಳುಹಿಸಲಾಗಿದೆ. ಇದರ ಅರ್ಥ ಏನು, ಇಷ್ಟೆಲ್ಲಾ ಆದರೂ ಸಹ ನಮಗೆ ಸಂಬಂಧವಿಲ್ಲ ಅವರು ಏನಾದರೂ ಮಾಡಿಕೊಳ್ಳಲಿ ಎಂದು ಯಡಿಯೂರಪ್ಪ ಹೇಳುತ್ತಿದ್ದಾರೆ. ಅವರೇ ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.