ಮೈತ್ರಿ ಸರ್ಕಾರದ 13 ಶಾಸಕರು ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದರು. ಇದರ ಬೆನ್ನಲ್ಲೇ ಪಕ್ಷೇತರ ಶಾಸಕ ಹೆಚ್. ನಾಗೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದ್ದಾರೆ.
ತಮಗೆ ಸಚಿವ ಸ್ಥಾನ ನೀಡಿದರೂ ಖಾತೆ ನೀಡಲಿಲ್ಲ ಎಂಬ ಕಾರಣಕ್ಕೆ ಹೆಚ್.ನಾಗೇಶ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಶ್ ಪಕ್ಷೇತರ ಅಭ್ಯರ್ಥಿ ಆಗಿರುವುದರಿಂದ ಅವರ ವಿರುದ್ಧ ವಿಪ್ ಜಾರಿಗೊಳಿಸಿ ಶಾಸಕ ಸ್ಥಾನದಿಂದ ಅನೂರ್ಜಿತಗೊಳಿಸುವುದು ಸಾಧ್ಯವಿಲ್ಲ. ಹೀಗಾಗಿ ನಾಗೇಶ್ ಅವರು ಯಾವುದೇ ಸಂದರ್ಭದಲ್ಲೂ ಬಿಜೆಪಿಗೆ ಬೆಂಬಲ ಸೂಚಿಸಬಹುದು ಎಂದು ಹೇಳಲಾಗುತ್ತಿದೆ.