ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಸಚಿವರೆಲ್ಲರೂ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದರು.
ಆದರೇ ಪಕ್ಷೇತರ ಶಾಸಕರಾಗಿ ಕಾಂಗ್ರೆಸ್ ಕೈಹಿಡಿದು ಸಚಿವರಾಗಿದ್ದ ಆರ್ ಶಂಕರ್ ಮಾತ್ರ ರಾಜೀನಾಮೆ ನೀಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದರ ಬೆನ್ನಲ್ಲೇ, ಪಕ್ಷೇತರ ಶಾಸಕ, ಇತ್ತೀಚಿಗೆ ಸಚಿವ ಸಂಪುಟ ಸೇರಿ, ಸಚಿವರಾಗಿದ್ದ ಆರ್ ಶಂಕರ್ ಕೂಡ ಇದೀಗ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿರುವ ಸಚಿವ ಆರ್.ಶಂಕರ್, ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.