ರಾಜೀನಾಮೆ ವಾಪಸ್ ಪಡೆಯುವಂತೆ ರಾಮಲಿಂಗಾರೆಡ್ಡಿ ಅವರ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪಕ್ಷದ ನಾಯಕರ ನಡೆಯಿಂದ ಬೇಸತ್ತು ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ. ಆದರೆ ಪಕ್ಷ ಮತ್ತು ಕಾರ್ಯಕರ್ತರ ಮೇಲೆ ಅವರು ಬೇಸರವಾಗಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ರಾಮಲಿಂಗಾರೆಡ್ಡಿ ಅವರು ವಾಪಸ್ ಪಡೆಯಬೇಕು. ಕಾಂಗ್ರೆಸ್ ಪಕ್ಷದಲ್ಲಿ ಇರಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಇನ್ನು ರಾಮಲಿಂಗಾರೆಡ್ಡಿ ಅವರ ನಿವಾಸಕ್ಕೆ ಆಗಮಿಸಿದ ಬಿಜೆಪಿ ನಾಯಕರು ಸಮಾಲೋಚನೆ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ನಾಯಕರು ರಾಮಲಿಂಗಾರೆಡ್ಡಿ ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ.
ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೆ ರಾಮಲಿಂಗಾರೆಡ್ಡಿ ಹಾಜರಾಗುವುದಿಲ್ಲ.ತಮ್ಮ ನಿರ್ಧಾರಕ್ಕೆ ಅವರು ಬದ್ಧರಾಗಿದ್ದಾರೆ. ಆದರೆ, ಅವರ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮುಂದುವರೆದಿದ್ದು, ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಡ ಹೇರಲಾಗಿದೆ.