ರಾಜೀನಾಮೆ ನೀಡಿದ ಅತೃಪ್ತರು ಮುಂಬೈನಿಂದ ಗೋವಾಗೆ ಶಿಫ್ಟ್..! ಮುಂದೇನು ?

Date:

ಮೈತ್ರಿ ಸರ್ಕಾರ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್-ಜೆಡಿಎಸ್‍ನ ಅತೃಪ್ತ ಶಾಸಕರು ಮುಂಬೈನ ಸೋಫಿಟೆಲ್ ಹೋಟೆಲ್‍ನಿಂದ ಗೋವಾದತ್ತ ಪ್ರಯಾಣ ಬೆಳಸಿದ್ದಾರೆ.ಕಳೆದ ಶನಿವಾರದಿಂದ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನ ಸೋಫಿಟೆಲ್ ಹೋಟೆಲ್‍ನಲ್ಲಿದ್ದ ಕಾಂಗ್ರೆಸ್-ಜೆಡಿಎಸ್‍ನ 13 ಶಾಸಕರು ಹಾಗೂ ಒಬ್ಬ ಪಕ್ಷೇತರ ಶಾಸಕನನ್ನು ಮುಂಬೈನಿಂದ ಗೋವಾಗೆ ಶಿಫ್ಟ್ ಮಾಡಲಾಗಿದೆ.

ಮುಂಬೈ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮೋಹಿತ್ ಭಾರತೀಯ ಅವರು 14 ರೆಬಲ್ ಶಾಸಕರನ್ನು ಖಾಸಗಿ ಬಸ್‍ನಲ್ಲಿ ಗೋವಾಗೆ ಕರೆದೊಯ್ದಿದ್ದಾರೆ. ಬಂಡಾಯ ಶಾಸಕರು ಮುಂಬೈನಿಂದ ಗೋವಾಗೆ ತೆರಳುತ್ತಿದ್ದು, ನಾಳೆ ಬೆಳಗ್ಗೆ ಪಣಜಿ ತಲುಪಲಿದೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಸಚಿವ ಡಿ.ಕೆ.ಶಿವಕುಮಾರ್ ಅವರು ಅತೃಪ್ತ ಶಾಸಕರ ಮನವೊಲಿಸಲು ಮುಂಬೈಗೆ ಆಗಮಿಸುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರನ್ನು ಮುಂಬೈನಿಂದ ಗೋವಾಗೆ ಶಿಫ್ಟ್ ಮಾಡುತ್ತಿದೆ ಎಂದು ಹೇಳಲಾಗಿದೆ.

ಕಾಂಗ್ರೆಸ್‍ನ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್, ಮಹಾಲಕ್ಷೀ ಲೇಔಟ್ ಶಾಸಕ ಗೋಪಾಲಯ್ಯ, ಹುಣಸೂರು ಶಾಸಕ ಹೆಚ್.ವಿಶ್ವನಾಥ್ ಹಾಗೂ ಕೆ.ಆರ್ ಪೇಟೆ ಶಾಸಕ ನಾರಾಯಣ ಗೌಡ ಅವರು ಕಳೆದ ಶನಿವಾರ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.

ರಾಜಪಾಲರ ಭೇಟಿ ಬಳಿಕ ರಾಜಭವನದಿಂದ ಎಚ್‍ಎಎಲ್ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ತೆರಳಿದ್ದರು. ಇಂದು ಪಕ್ಷೇತರ ಶಾಸಕ ನಾಗೇಶ್ ಹಾಗೂ ಆರ್ ಶಂಕರ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿ ರೆಬಲ್ ಶಾಸಕರ ತಂಡ ಸೇರಿಕೊಂಡಿದ್ದಾರೆ

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....