ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸೇಫಾಗಿದೆ. ಅತೃಪ್ತ ಶಾಸಕರ ಜೊತೆ ಕಳೆದ ದಿನವೂ ಮಾತನಾಡಿದ್ದೆ. ಇಂದು ಬೆಳಗ್ಗೆಯೂ ಮಾತನಾಡಿದ್ದೇನೆ. ಅವರ ಬೇಡಿಕೆಗಳನ್ನು ನನ್ನ ಬಳಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮಗೂ ರಾಜೀನಾಮೆಗೂ ಸಂಬಂಧವಿಲ್ಲ ಎಂದು ಹೇಳುತ್ತಾರೆ. ಆದರೆ, ರಾಜನಾಥ್ ಸಿಂಗ್ ಹೇಳಿಕೆ ನೋಡಿದರೆ ಬಿಜೆಪಿಯೇ ಬೆಂಬಲ ನೀಡುತ್ತಿದೆ ಎನ್ನುವುದು ಗೊತ್ತಾಗುತ್ತದೆ. ಬಿಎಸ್ ವೈ ಸಹಾಯಕನೇ ಖುದ್ದು ಶಾಸಕರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ.
ಇನ್ನು ಮೈತ್ರಿ ಸರ್ಕಾರಕ್ಕೆ ಏನೂ ಆಗೋದಿಲ್ಲ. ಎಲ್ಲ ಸಮಸ್ಯೆಗಳನ್ನು ಸಿಎಲ್ ಪಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸ್ಪೀಕರ್ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಶಾಸಕರ ರಾಜೀನಾಮೆಯಿಂದ ಕಾಂಗ್ರೆಸ್ ಭಯಪಡುವುದಿಲ್ಲ ಎಂದರು.