ಮುಂಬೈನ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದ ವಿಷಯದಲ್ಲಿ ಸದ್ಯದಕ್ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಇಷ್ಟು ಉನ್ನತ್ತ ಸ್ಥಾನಕ್ಕೆ ನಮ್ಮನ್ನು ಶಿವಕುಮಾರ್ ಅವರೇ ಕರೆತಂದಿದ್ದಾರೆ. ಆದರೆ, ಶಿವಕುಮಾರ್ ಸೇರಿದಂತೆ ಯಾರನ್ನೂ ಭೇಟಿ ಮಾಡಲ್ಲ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದೇವೆ. ಹೀಗಾಗಿ ನಾವು ಮಾತುಕತೆಗೆ ಮುಂದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜಕಾರಣದಲ್ಲಿ ನಾವು ಮಾಡುತ್ತಿರುವುದು ಸರಿನೋ, ತಪ್ಪೋ ಒಂದು ಹೆಜ್ಜೆಯನ್ನು ಮುಂದೆ ಇಟ್ಟಿದ್ದೇವೆ. ನಾವು ರಾಜಕೀಯ ದೃಷ್ಟಿಯಿಂದ ಯಾರನ್ನೂ ಭೇಟಿಯಾಗುವುದಿಲ್ಲ. ಹೀಗಾಗಿ ಯಾರು ಬರುವುದು ಬೇಡ ಎಂದು ಹೇಳಿದ್ದೇವೆ. ಬೆಂಗಳೂರಿಗೆ ಬಂದ ನಂತರ ಮೊದಲು ಶಿವಕುಮಾರ್ ಅವರನ್ನು ಭೇಟಿಯಾಗಿ ವಾಸ್ತವ ಸ್ಥಿತಿ ಏನಿದೆ ಎಂಬುದು ಹೇಳುವ ಕೆಲಸ ಮಾಡುತ್ತೇವೆ ಎಂದರು.