ಘಟನೆ ಬಗ್ಗೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇಂದು ಮುಂಬಯಿ ಹಾಗೂ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಘಟನೆಗಳು ಬಿಜೆಪಿ ಪ್ರಜಾಪ್ರಭುತ್ವದ ಎಲ್ಲಾ ಎಲ್ಲೆಗಳನ್ನು ಮೀರಿ ವರ್ತಿಸುತ್ತಿರುವುದು ಹಾಗೂ ನಾಗರಿಕ ಸಂಹಿತೆಯನ್ನು ಮೀರಿರುವುದು ಸ್ಪಷ್ಟ ಎಂದರು.
ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕರ ವರ್ತನೆ ಜಿಗುಪ್ಸೆ ಹುಟ್ಟಿಸುವಂತಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕರೊಂದಿಗೆ ಚರ್ಚೆ ನಡೆಸುತ್ತಿದ್ದ ಸಮಯದಲ್ಲಿ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ವರ್ತಿಸಿದ ರೀತಿ ವಿಧಾನಸೌಧಕ್ಕೆ ಅಷ್ಟೇ ಅಲ್ಲ, ಕರ್ನಾಟಕದ ರಾಜಕಾರಣದ ಶ್ರೇಷ್ಟ ಪರಂಪರೆಗೂ ಮಸಿ ಬಳಿದಿದೆ, ಬಿಜೆಪಿ ನಡವಳಿಕೆಯಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ನಗೆಪಾಟಲಿಗೀಡಾಗಿದೆ ಎಂದರು.