ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಭೇಟಿ ಮಾಡಿ ಸಿಎಂ ಕುಮಾರಸ್ವಾಮಿ ನಾಳೆ ರಾಜೀನಾಮೆ ಸಲ್ಲಿಸಲಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿದೆ.ಈ ನಡುವೆ ನಾಳೆ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ಕರೆದಿದ್ದು, ಸಿಎಂ ನಡೆ ಕುತೂಹಲ ಕೆರಳಿಸಿದೆ. ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಸಂಪುಟ ಸಭೆಯನ್ನು ಬೆಳಗ್ಗೆ 11 ಗಂಟೆಗೆ ಕರೆಯಲಾಗಿದೆ.
ಕಾಂಗ್ರೆಸ್ ಸರಕಾರ ರಚಿಸಿದರೆ ಜೆಡಿಎಸ್‌ನಿಂದ ಬೆಂಬಲ ನೀಡುವುದಾಗಿ ಕೂಡ ಅವರು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದ್ದು, ಇಂದು ಅಥಾವ ನಾಳೆ ಅವರು ರಾಜೀನಾಮೆಯನ್ನು ನೀಡಲಿದ್ದಾರೆ ಎನ್ನಲಾಗುತ್ತಿದೆ.ತಮ್ಮ ಕೊನೆ ಅಸ್ತ್ರವನ್ನು ಪ್ರಯೋಗಿಸುವ ಮುನ್ನ ಅವರು ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಮಾತುಕತೆ ನಡೆಸಲಿದ್ದು ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ.