ಸುಮಾರು 800 ಜನ ಎಂಜಿನಿಯರ್ ಗಳಿಗೆ ಬಡ್ತಿ ಹಾಗೂ ವರ್ಗಾವಣೆ ಮಾಡಿದ್ದು, ಇದಕ್ಕಾಗಿ 500 ಕೋಟಿ ರೂ. ಹಣ ಪಡೆದಿದ್ದಾರೆ. ಎಸ್‍ಸಿ, ಎಸ್‍ಟಿ ಮತ್ತು ಓಬಿಸಿ ಸಮುದಾಯದ ಎಂಜಿನಿಯರ್ ಗಳು ವರ್ಗಾವಣೆ ಮಾಡಿಸಿಕೊಳ್ಳಲು ಒಂದು ವರ್ಷದಿಂದ ಕಾಯುತ್ತಿದ್ದರು. ಇಂತಹ ಸಮಯದಲ್ಲಿ ಹಣ ಪಡೆದು ಏಕಾಏಕಿ ಮನಬಂದಂತೆ ಎಂಜಿನಿಯರ್‍ಗಳನ್ನು ವರ್ಗಾವಣೆ ಮಾಡಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಿ, ಸರ್ಕಾರ ಮಾಡಿರುವ ವರ್ಗಾವಣೆಯನ್ನು ಹಿಂಪಡೆಯಬೇಕು ಎಂದು ರಾಜ್ಯಪಾಲರಿಗೆ ಲಿಂಗಮೂರ್ತಿ ದೂರು ನೀಡಿದ್ದಾರೆ.
ಈ ನಡುವೆ ಸರ್ಕಾರ ಅಲ್ಪ ಮತಕ್ಕೆ ಕುಸಿದ ಪರಿಣಾಮ ಕ್ಯಾಬಿನೆಟ್ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ