ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಜೆಡಿಎಸ್-ಬಿಜೆಪಿ ನಾಯಕರ ಭೇಟಿ ಕಾಕತಾಳಿಯ ಅಷ್ಟೇ, ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ಈ ಹಿಂದೆ ಜೆಡಿಎಸ್ ಜೊತೆ ಸರ್ಕಾರ ರಚಿಸಿ ಸೋತು ಹೋಗಿದ್ದೇವೆ ಎಂದರು.
ಇನ್ನು ಜೆಡಿಎಸ್ ಮುಖಂಡ ಸಾ.ರಾ. ಮಹೇಶ್ ಅವರು ಬಿಜೆಪಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಜೆಡಿಎಸ್-ಬಿಜೆಪಿ ಮತ್ತೊಮ್ಮೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲಿದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.