ಅತೃಪ್ತ ಶಾಸಕರನ್ನು ದಿಕ್ಕುತಪ್ಪಿಸಲು ವಿಶ್ವಾಸ ಮತಯಾಚನೆ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿರುವ ಶಾಸಕರ ದಿಕ್ಕುತಪ್ಪಿಸುವ ಉದ್ದೇಶದಿಂದ ವಿಶ್ವಾಸಮತ ಯಾಚನೆ ಬಗ್ಗೆ ಸಿಎಂ ಕುಮಾರಸ್ವಾಮಿ ಪ್ರಸ್ತಾಪಿಸಿದ್ದಾರೆ. ವಾತಾವರಣ ನಮಗೆ ಅನುಕೂಲಕರವಾಗಿದೆ ಎಂದು ತಿಳಿಸಿದ್ದಾರೆ.
ನಮಗೆ ಅನುಕೂಲವಾದ ವಾತಾವರಣ ಇದ್ದರೂ ವಿಶ್ವಾಸಮತಯಾಚನೆ ಮಾಡುವ ಧೈರ್ಯ ಮಾಡಿದ್ದಾರೆ. ನಾವು ಅದನ್ನು ಸ್ವಾಗತಿಸುತ್ತೇವೆ. ಕೆಲವೇ ದಿನಗಳಲ್ಲಿ ರಾಜ್ಯದ ಮೈತ್ರಿ ಸರ್ಕಾರ ಬಿದ್ದು ಹೋಗಲಿದೆ. ಸಿಎಂ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡುವ ರಾಜಕೀಯ ಷಡ್ಯಂತ್ರ ರೂಪಿಸಿದ್ದಾರೆ. ರಾಜೀನಾಮೆ ನೀಡಿರುವ ಶಾಸಕರನ್ನು ತಡೆಯುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ.ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ. ವಿಶ್ವಾಸಮತ ಯಾಚಿಸುವುದರಲ್ಲಿ ಅರ್ಥವೇ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.