ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ಬಸವೇಶ್ವರ ನಗರದ ಮನೆಯೊಂದರಲ್ಲಿ ಭೇಟಿ ಮಾಡಿ ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೊಣವಿನ ಕೆರೆ ಅಜ್ಜಯ್ಯನ ದರ್ಶನಕ್ಕೆ ತೆರಳಿದ್ದರು. ಅಲ್ಲಿಗೆ ಯಡಿಯೂರಪ್ಪ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಅಜ್ಜಯ್ಯನ ದರ್ಶನಕ್ಕೆ ಹೋಗಿದ್ದರು. ಈ ವೇಳೆ ಬಸವೇಶ್ವರ ನಗರದ ನಿವಾಸದಲ್ಲಿ ಅಚಾನಕ್ಕಾಗಿ ಸಿಕ್ಕ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು 1 ಗಂಟೆಗಳ ಕಾಲ ಮಾತುಕತೆ ನಡೆಸಿದ್ದು, ಬಿಜೆಪಿಗೆ ಸೇರುವಂತೆ ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.