ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಜೆಪಿಗೆ ಬರುತ್ತಾರೆ ಎಂದು ಸುದ್ದಿ ಬರುತ್ತಿದೆ. ನಮಗೆ ಏನು ತಲೆ ಕೆಟ್ಟಿದೆಯಾ, ಲಕ್ಷ್ಮಿ ಹೆಬ್ಬಾಳ್ಕರ್ ಮೇಲೆ ಮುನಿಸಿಕೊಂಡೇ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ಮುಂಬೈಗೆ ಹೋಗಿದ್ದಾರೆ. ಆದ್ದರಿಂದ ಅವರು ಬಿಜೆಪಿಗೆ ಬರುತ್ತೀನಿ ಎಂದು ಹೇಳಿಲ್ಲ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಎಲ್ಲಿಯೂ ಹೇಳಿಲ್ಲ.ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.