ಕಳೆದ ಶನಿವಾರ ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರದ ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬಳಿಕ ರೇವಣ್ಣ ಅವರು ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆಹೋಗಿದ್ದಾರೆ.
ಶನಿವಾರದಿಂದ ರೇವಣ್ಣ ಅವರು ಶೃಂಗೇರಿ ಶಾರದಾಂಬೆ, ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಮೈತ್ರಿ ಸರ್ಕಾರದ ಉಳಿವಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಮತ್ತೆ ಇಂದು ಕೊಲ್ಲೂರು ಮೂಕಾಂಬಿಕ ಮತ್ತು ಆನೆಗುಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ