ಸುದ್ದಿಗಾರರ ಜೊತೆಗೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ ಅಪ್ಪ-ಮಕ್ಕಳ ಜೊತೆ ಹೋದರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಯಾವುದೋ ಕಾಲದಿಂದಲೂ ಹೇಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಈ ಬಗ್ಗೆ ನೇರವಾಗಿ ಹೇಳಿದ್ದೆ. ಈಗ ಅವರು ಇದನ್ನು ಅರ್ಥೈಸಿಕೊಂಡಂತೆ ಕಾಣಿಸುತ್ತಿದೆ. ಆದರೆ ಈಗಲೂ ಕೂಡ ಸಿದ್ದರಾಮಯ್ಯ ಅವರ ಮೇಲೆಯೇ ಆರೋಪ ಮಾಡಲಾಗುತ್ತಿದೆ. ಜೆಡಿಎಸ್ ಪಕ್ಷದಿಂದ ಹೋದ ಶಾಸಕರ ಬಗ್ಗೆ ಮಾತನಾಡುತ್ತಿಲ್ಲ ಅಂತ ಹೇಳಿದರು.
ಇನ್ನು ಲೋಕೋಪಯೋಗಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ.ಸಚಿವರ ಸ್ಥಾನ ಬದಲಾಗಿದ್ದು, ಅವರು ವರ್ಗಾವಣೆ ಮಂತ್ರಿಯಾಗಿದ್ದಾರೆ ಎಂದು ವ್ಯಂಗ್ಯವಾಡಿದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದಿಂದ ಅಭಿವೃದ್ಧಿಯಾಗಲ್ಲ ಎಂದು ಜನ ಮನಗಂಡಿದ್ದಾರೆ. ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಜನಪರವಾದ ಕೆಲಸವನ್ನು ಮಾಡುತ್ತದೆ. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ವ್ಯಕ್ತಪಡಿಸಿದ್ದಾರೆ.