ರಾಜ್ಯದ ರಾಜಕೀಯ ಬೆಳವಣಿಗೆ, ಸುಪ್ರೀಂ ಕೋರ್ಟ್ ತೀರ್ಪು, ವಿಶ್ವಾಸಮತ ಯಾಚನೆ ಕುರಿತಾದ ಚರ್ಚೆಯಲ್ಲಿ ನಾಯಕರಿದ್ದಾರೆ.ಇದರ ನಡುವೆ ಬಿಜೆಪಿ ಸರ್ಕಾರ ರಚನೆ ಪ್ರಯತ್ನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿದ್ದಾರೆ. ಅವರು ದೇವರ ಮೊರೆ ಹೋಗಿದ್ದಾರೆ.
ರಾಜ್ಯದಲ್ಲಿ ರಾಜಕೀಯ ಸ್ಥಿತ್ಯಂತರದ ನಡುವೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿ ಎಂದು ಅವರ ಸ್ವಗ್ರಾಮ ಬೂಕನಕೆರೆಯಲ್ಲಿ ಮನೆದೇವರು ಹಾಗೂ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅಲ್ಲದೆ ಬೀದರ್ ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ.
ಇಂದು ಬೆಳಗ್ಗೆ ಗವಿಗಂಗಾಧರೇಶ್ವರ ದೇಗುಲದಲ್ಲಿ ಲೋಕಕಲ್ಯಾಣರ್ಥವಾಗಿ ಯಡಿಯೂರಪ್ಪ ರುದ್ರಹೋಮ ನೆರವೇರಿಸಲಿದ್ದಾರೆ. ಗುರುವಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲಿದ್ದು, 4 – 5 ದಿನದಲ್ಲಿ ಸರ್ಕಾರ ರಚಿಸುವ ವಿಶ್ವಾಸ ಹೊಂದಿರುವ ಯಡಿಯೂರಪ್ಪ ಈಗಾಗಲೇ ದೇವರ ಮೊರೆ ಹೋಗಿದ್ದಾರೆ