ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ ಈ ಹಿಂದೆ ರಾಜ್ಯಪಾಲರು ಯಡಿಯೂರಪ್ಪಗೆ ಬಹುಮತ ಸಾಬೀತು ಮಾಡಲು ಸಮಯ ಕೊಟ್ಟಿದ್ದರು. ಅಂದು ಬಿಎಸ್ ವೈ ರಾಜ್ಯಪಾಲರು ನಿಗದಿ ಮಾಡಿದ್ದ ಸಮಯದಲ್ಲೇ ನಿಯಮವನ್ನು ಪಾಲಿಸಿದ್ದರು. ಆದರೆ, ಈ ಸರ್ಕಾರ ರಾಜ್ಯಪಾಲರ ಸಂದೇಶಗಳನ್ನು ಗೌರವಿಸಿಲ್ಲ. ಈ ಸರ್ಕಾರಕ್ಕೆ ಬಹುಮತ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.
ಸರ್ಕಾರವು ಸೋಮವಾರ ಬಹುಮತ ಕಳೆದುಕೊಳ್ಳುತ್ತದೆ. ಮತ್ತೊಮ್ಮೆ ಚುನಾವಣೆಗೆ ಹೋಗಲು ಯಾರಿಗೂ ಇಷ್ಟವಿಲ್ಲ. ರಾಜ್ಯದ ರಾಜಕೀಯ ಬಿಕ್ಕಟ್ಟು ನೋಡಿ ರಾಷ್ಟ್ರಪತಿಯವರೇ ಮಧ್ಯಪ್ರವೇಶ ಮಾಡಬಹುದು