ಬ್ರಹ್ಮನೇ ಬಂದರೂ ನಾಳೆ ಸಮ್ಮಿಶ್ರ ಸರ್ಕಾರ ಉಳಿಯುವುದಿಲ್ಲ. ಸಮ್ಮಿಶ್ರ ಸರ್ಕಾರದ ಭವಿಷ್ಯ ನಾಳೆಗೆ ಅಂತ್ಯವಾಗಲಿದೆ ಎಂದು ತುಮಕೂರಿನಲ್ಲಿ ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಸರ್ಕಾರ ಪತನದ ಬಳಿಕ ಜೀರೋ ಟ್ರಾಫಿಕ್ ಕೂಡ ಇರುವುದಿಲ್ಲ. ನಮ್ಮ ಜಿಲ್ಲೆಯಲ್ಲಿ ಜೀರೋ ಟ್ರಾಫಿಕ್ ಕೂಡ ಇರುವುದಿಲ್ಲ ಎಂದು ಡಿಸಿಎಂ ಪರಮೇಶ್ವರ್ ವಿರುದ್ಧ ಕೆ.ಎನ್.ರಾಜಣ್ಣ ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರ ಜನರಿಗೆ ಏನೂ ಮಾಡಿಲ್ಲ. ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು ಎಂದು ಹೇಳಿದ್ದಾರೆ.
ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ವಿಚಾರ ಹೊಸ ವಿಚಾರವೇನಲ್ಲ. ನನ್ನಿಂದಲೇ ಸೋತಿದ್ದೇನೆ ಎಂದು ದೇವೇಗೌಡರು ದ್ವೇಷ ಮಾಡುತ್ತಿದ್ದಾರೆ. ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು ದ್ವೇಷ ಮಾಡುತ್ತಿದ್ದಾರೆ. ದೇವೇಗೌಡರು ಮತ್ತು ಜಿಲ್ಲೆಯ ಜೀರೋ ಟ್ರಾಫಿಕ್ ಮಂತ್ರಿ ಇದಕ್ಕೆ ನೇರ ಕಾರಣ ಎಂದು ಆರೋಪಿಸಿದ್ದಾರೆ.