ರಾಜ್ಯದಲ್ಲಿನ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತ ಸೋತ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದು ತಮಗೆ ಬೆಂಬಲಿಸಿದ್ದಕ್ಕಾಗಿ ಧನ್ಯವಾದ ಹೇಳಿದ್ದಾರೆ.
ನಮ್ಮ ಪಕ್ಷದ 105 ಶಾಸಕರು ಕಲ್ಲಿನಂತೆ ಪಕ್ಷದ ಜತೆಗೆ ನಿಂತರು ಕಳೆದ ಮೂರು ದಿನಗಳಲ್ಲಿ ಬಹಳ ಕ್ಲಿಷ್ಟಕರ ರಾಜಕೀಯ ಪರಿಸ್ಥಿತಿಯನ್ನು ನಾವು ಎದುರಿಸಿದ್ದೆವು. ಆದರೆ, ಅದನ್ನೆಲ್ಲ ಮೀರಿ ನಾವು ಮೇಲೆದ್ದು ಬಂದೆವು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.