ಸರ್ಕಾರ ರಚನೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸಿದ್ದು, ಬಿ.ಎಸ್. ಯಡಿಯೂರಪ್ಪ ಅವರ ಪದಗ್ರಹಣವು ಜ್ಯೋತಿಷಿಗಳ ಸಲಹೆಯಂತೆ ನಡೆಯಲಿದೆಯಂತೆ.
ಯಡಿಯೂರಪ್ಪ ಅವರಿಗೆ ಜ್ಯೋತಿಷಿಗಳು ಎರಡು ಮುಹೂರ್ತ ನೀಡಿದ್ದು, ಗುರುವಾರ ಮಧ್ಯಾಹ್ನ 3.28 ನಿಮಿಷದಿಂದ 3.48 ನಿಮಿಷದವರೆಗೆ ಅಥವಾ ಶುಕ್ರವಾರ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕರಿಸುವಂತೆ ತಿಳಿಸಿದ್ದಾರೆ. ಯಡಿಯೂರಪ್ಪ ಗುರುವಾರದ ಮುಹೂರ್ತದಲ್ಲಿ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.