ಪೈಲ್ವಾನ್ ಮಾತ್ರವಲ್ಲ ಕುರುಕ್ಷೇತ್ರ ಕೂಡ ಮುಂದಕ್ಕೆ..!

Date:

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಈ ಎರಡು ಸಿನಿಮಾಗಳು ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆಯನ್ನು ಹುಟ್ಟು ಹಾಕಿರುವ ಚಿತ್ರಗಳು.
ಸುದೀಪ್ ಮತ್ತು ದರ್ಶನ್ ಅಭಿಮಾನಿಗಳು ಬಹುದಿನಗಳಿಂದ ಈ ಸಿನಿಮಾಗಳಿಗೆ ಕಾಯುತ್ತಿದ್ದಾರೆ. ಆಗಸ್ಟ್ 9ಕ್ಕೆ ಕುರುಕ್ಷೇತ್ರ ಮತ್ತು ಪೈಲ್ವಾನ್ ಎರಡೂ ಒಂದೇ ದಿನ ರಿಲೀಸ್ ಆಗುತ್ತವೆ ಎಂದೇ ಹೇಳಲಾಗುತ್ತಿತ್ತು. ಈ ಎರಡು ಸಿನಿಮಾಗಳು ಒಟ್ಟಿಗೆ ರಿಲೀಸಾದ್ರೆ ಥಿಯೇಟರ್​​ಗಳ ಸಮಸ್ಯೆ ಎದುರಾಗಬಹುದು. ಕಲೆಕ್ಷನ್ ವಿಚಾರದಲ್ಲೂ ಲಾಸ್ ಆಗುವ ಸಾಧ್ಯತೆ ಇತ್ತು. ಆದರೆ, ಈ ಎರಡು ಸಿನಿಮಾ ರಿಲೀಸ್ ಡೇಟ್​ ನಲ್ಲಿ ಬದಲಾವಣೆಗಳಾಗಿದ್ದವು.
ಕುರುಕ್ಷೇತ್ರ ಆಗಸ್ಟ್ 2ಕ್ಕೆ ಪೈಲ್ವಾನ್ ಆಗಸ್ಟ್ 29ಕ್ಕೆ ರಿಲೀಸ್ ಎಂದು ತಿಳಿದುಬಂದಿತ್ತು. ಎಲ್ಲೆಡೆ ಸುದ್ದಿಗಳೂ ಕೂಡ ಹೀಗೆ ಹರಿದಾಡಿದ್ದವು. ಆದರೆ, ಪೈಲ್ವಾನ್ ಮತ್ತೂ ಮುಂದಕ್ಕೆ ಹೋಗಿ ಸೆಪ್ಟೆಂಬರ್ 12ಕ್ಕೆ ರಿಲೀಸ್ ಆಗಲಿದೆ ಎನ್ನುವುದು ನಿನ್ನೆಯಷ್ಟೇಯಾದ ಪಕ್ಕಾ ವರದಿ. ಆದರೆ,. ಈ ಪೈಲ್ವಾನ್ ಮಾತ್ರವಲ್ಲದೆ ಕುರುಕ್ಷೇತ್ರ ಕೂಡ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ.


ಕುರುಕ್ಷೇತ್ರ ಆಗಸ್ಟ್ 2ಕ್ಕೆ ರಿಲೀಸ್ ಆಗುತ್ತಿಲ್ಲ. ಆಗಸ್ಟ್ 9ಕ್ಕೆ ಮುಂದೂಡಲ್ಪಟ್ಟಿದೆ ಎಂದು ತಿಳಿದುಬಂದಿದೆ. ಮುನಿರತ್ನ ನಿರ್ಮಾಣದ, ನಾಗಣ್ಣ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್ ಅವರಲ್ಲದೆ ರೆಬೆಲ್ ಸ್ಟಾರ್ ಅಂಬರೀಶ್, ಅರ್ಜುನ್ ಸರ್ಜಾ, ಕ್ರೇಜಿಸ್ಟಾರ್ ರವಿಚಂದ್ರನ್, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ರವಿಶಂಕರ್ ಸೇರಿದಂತೆ ದೊಡ್ಡ ತಾರಗಣವಿದೆ.
ಪೈಲ್ವಾನ್ ಹೆಬ್ಬುಲಿ ಖ್ಯಾತಿಯ ಕೃಷ್ಣ ಡೈರೆಕ್ಷನ್ ಮಾಡಿರುವ ಸಿನಿಮಾ, ಈ ಸಿನಿಮಾದಲ್ಲಿ ಸುದೀಪ್ ಗೆ ನಾಯಕಿಯಾಗಿ ಆಕಾಂಕ್ಷ ನಟಿಸಿದ್ದಾರೆ. ಸುನೀಲ್ ಶೆಟ್ಟಿ, ಸುಶಾಂತ್ ಸಿಂಗ್ ಸೇರಿದಂತೆ ಅನೇಕ ಸ್ಟಾರ್​ ನಟರು ಅಭಿನಯಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...