15 ಶಾಸಕರ ರಾಜೀನಾಮೆ ಬಳಿಕ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಪತನಗೊಂಡಿದ್ದು, ಬಿಜೆಪಿ ಹೊಸ ಸರ್ಕಾರ ರಚಿಸಲಿದೆ ಎಂಬ ಮಾತುಗಳ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ತಮ್ಮ ನಿವಾಸದಲ್ಲಿ ಬೆಂಬಲಿಗರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯವರಿಗೆ ಸರ್ಕಾರ ರಚಿಸುವ ಮನಸ್ಸಿಲ್ಲ. ಅವರು ಮಧ್ಯಂತರ ಚುನಾವಣೆಗೆ ಮುಂದಾಗುವ ಸಾಧ್ಯತೆ ಇದ್ದು, ಇದಕ್ಕೆ ಈಗಿನಿಂದಲೇ ಸಿದ್ದತೆ ನಡೆಸಿ ಎಂದು ಹೇಳಿದ್ದಾರೆ.
ಅವರ ಈ ಹೇಳಿಕೆಗೆ ಪೂರಕವೆಂಬಂತೆ ಬಿಜೆಪಿ ಕೇಂದ್ರ ನಾಯಕರು ಕರ್ನಾಟಕದಲ್ಲಿ ಸರ್ಕಾರ ರಚನೆಗೆ ರಾಜ್ಯ ಬಿಜೆಪಿ ನಾಯಕರಿಗೆ ಗ್ರೀನ್ ಸಿಗ್ನಲ್ ನೀಡದೆ ಇನ್ನೂ ಮೀನಾಮೇಷ ಎಣಿಸುತ್ತಿದ್ದು, ಇದು ರಾಜ್ಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.