ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಿಯೋಜಿತ ಮುಖ್ಯಮಂತ್ರಿಯವರಿಗೆ ಒಂದು ವಾರದೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ವಜುಭಾಯ್ ವಾಲಾ ಸೂಚಿಸಿದ್ದಾರೆಂಬ ಮಾತುಗಳು ಕೇಳಿಬರುತ್ತಿದ್ದು, ಒಂದೊಮ್ಮೆ ಇದು ಸತ್ಯವಾಗಿದ್ದರೆ ಬಿಜೆಪಿಗೆ ಕಷ್ಟಕರವಾಗಿ ಪರಿಣಮಿಸಲಿದೆ.
ರಾಜೀನಾಮೆ ನೀಡಿರುವ ಶಾಸಕರುಗಳ ಪೈಕಿ ಮೂವರು ಅನರ್ಹಗೊಂಡಿದ್ದರೆ ಉಳಿದವರ ರಾಜೀನಾಮೆ ವಿಚಾರ ಇನ್ನೂ ಇತ್ಯರ್ಥವಾಗಿಲ್ಲ. ಯಡಿಯೂರಪ್ಪನವರಿಗೆ ಈಗ ನೀಡಿರುವ ಕಾಲಾವಕಾಶದೊಳಗೆ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದರೆ ಬಹುಮತ ಸಾಬೀತುಪಡಿಸುವುದು ಕಷ್ಟವಾಗುತ್ತದೆ.