ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಧಾನಿ ಮೋದಿ ಅವರಷ್ಟೇ ಪವರ್ ಫುಲ್ ಆಗಿದ್ದಾರೆ ಎಂದು ತುಮಕೂರಿನಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಕೇಂದ್ರದಲ್ಲಿ ಪ್ರಧಾನಿ ಮೋದಿಯವರ ಪ್ರಭಾವ ಹೇಗೆ ಇದೆಯೋ ಕರ್ನಾಟಕದಲ್ಲಿ ಯಡಿಯೂರಪ್ಪರ ಪ್ರಭಾವವೂ ಅಷ್ಟೇ ಇದೆ. ಯಡಿಯೂರಪ್ಪನವರಿಗೆ ವಯಸ್ಸಾಗಿರಬಹುದು. ಆದರೆ, ಅವರಿಗೆ ಸಾಧಿಸುವ ಛಲ, ಉತ್ಸಾಹವಿದೆ ಎಂದು ರಾಜಣ್ಣ ತಿಳಿಸಿದ್ದಾರೆ.
ಯಡಿಯೂರಪ್ಪನವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹೋಗಿದ್ದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಿ ನಾನು ಕಾರ್ಯಕ್ರಮಕ್ಕೆ ಹೋಗಿದ್ದೆ. ಅದನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.