ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದ ರಮೇಶ್ ಕುಮಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕಾರಣ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
17 ಮಂದಿ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಂದರ್ಭದಲ್ಲಿ ಅವರೆಲ್ಲರನ್ನೂ ಅನರ್ಹಗೊಳಿಸುವ ಮೂಲಕ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ ರಮೇಶ್ ಕುಮಾರ್ ಅವರ ನಡೆಗೆ ಪರ ಹಾಗೂ ವಿರೋಧದ ಅಭಿಪ್ರಾಯ ವ್ಯಕ್ತವಾಗಿತ್ತು.ಇಂದು ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ವಿಶ್ವಾಸಮತ ಯಾಚನೆಗೆ ಅನುಮತಿ ನೀಡಿದ್ದ ರಮೇಶ್ ಕುಮಾರ್ ಬಳಿಕ ಧನ ವಿನಿಯೋಗ ವಿಧೇಯಕ ಅಂಗೀಕಾರಕ್ಕೂ ಅನುವು ಮಾಡಿಕೊಟ್ಟಿದ್ದರು.