ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಆ ಸ್ಥಾನಕ್ಕೆ ಶಿರಸಿ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರಬಿಟ್ಟು ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಸ್ಪೀಕರ್ ಆಗಿ ಆಯ್ಕೆಯಾದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಆಡಳಿತ ಪಕ್ಷ ಹಾಗೂ ವಿಪಕ್ಷ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.