ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ವಹಿಸಿಕೊಂಡಾಗಿನಿಂದ ಬಿಎಸ್ ಯಡಿಯೂರಪ್ಪ ಒಂದಲ್ಲಾ ಒಂದು ಕೆಲಸಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಿದ್ದ ಯಡಿಯೂರಪ್ಪ ಇದೀಗ ಮುಖ್ಯಮಂತ್ರಿಗಳು ಮತ್ತು ಇತರ ಸಚಿವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 14 ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
ಎಚ್. ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಿವೃತ್ತ ಅಧಿಕಾರಿಗಳ ನೇಮಕ ಗುತ್ತಿಗೆ ಆಧಾರದಲ್ಲಿ ನಡೆದಿತ್ತು ಆದರೆ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಈ ಎಲ್ಲಾ 14 ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಿದ್ದಾರೆ.
14 ನಿವೃತ್ತ ಅಧಿಕಾರಿಗಳಲ್ಲಿ ಕೆಲವರು ಸಿಎಂ ಗೃಹ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಇನ್ನೂ ಕೆಲವರು ವಿವಿಧ ಸಚಿವರ ಕಚೇರಿಯಲ್ಲಿ ಕೆಲಸಕ್ಕೆ ನಿಯೋಜನೆಗೊಂಡಿದ್ದರು, ಇದೀಗ ಇವರೆಲ್ಲರಿಗೂ ಮುಕ್ತಿ ಸಿಕ್ಕಂತಾಗಿದೆ.