ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಬಿಜೆಪಿ ಶಾಸಕಾಂಗ ಪಕ್ಷದ ಬಿ.ಎಸ್. ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಈಗಾಗಲೇ ಬಹುಮತ ಸಾಬೀತುಪಡಿಸಿದ್ದಾರೆ. ಇದೀಗ ಸಚಿವ ಸಂಪುಟ ವಿಸ್ತರಣೆಗೆ ಕೈ ಹಾಕಿದ್ದು, ಸಹಜವಾಗಿಯೇ ಆಕಾಂಕ್ಷಿ ಶಾಸಕರುಗಳ ಒತ್ತಡ ಹೆಚ್ಚುತ್ತಿದೆ.
ಆದರೆ ಕಳೆದ ಬಾರಿ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸಚಿವ ಸ್ಥಾನ ನೀಡಿಕೆ ಸಂಬಂಧಿಸಿದಂತೆ ಕಷ್ಟಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡಿದ್ದ ಯಡಿಯೂರಪ್ಪನವರು ಈ ಬಾರಿ ಬಲು ಎಚ್ಚರಿಕೆಯಿಂದ ಹೆಜ್ಜೆಗಳನ್ನಿಡುತ್ತಿದ್ದಾರೆಂದು ಹೇಳಲಾಗಿದೆ.
ಸಚಿವ ಸ್ಥಾನ ಕೋರಿ ತಮ್ಮ ಮೇಲೆ ಒತ್ತಡ ಹೇರುತ್ತಿರುವ ಶಾಸಕರುಗಳಿಗೆ ಎಲ್ಲವೂ ಹೈಕಮಾಂಡ್ ಕೈಲಿದೆ ಎಂದು ಹೇಳುವ ಮೂಲಕ ನುಣುಚಿಕೊಳ್ಳುತ್ತಿದ್ದಾರೆಂದು ಹೇಳಲಾಗಿದೆ.