ಎರಡು ದಿನಗಳ ಹಿಂದೆ ನಗರದ ಖಾಸಗಿ ಹೊಟೇಲ್‌ನಲ್ಲಿ ಹಿರಿಯ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಅನರ್ಹ ಶಾಸಕ ಮುನಿರತ್ನ ಸುಮಾರು ಗಂಟೆಗೂ ಹೆಚ್ಚು ಕಾಲ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆಂದು ಎನ್ನಲಾಗುತ್ತಿದೆ.
ಜುಲೈ 6ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ ಅತೃಪ್ತ ಶಾಸಕರು ಮತ್ತು ಮುಂಬೈನಲ್ಲಿ ನಡೆದ ಎಲ್ಲ ಬೆಳವಣಿಗೆಗಳು ಹಾಗೂ ಇನ್ನಿತರ ವಿವರಗಳನ್ನು ಮುನಿರತ್ನ, ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
ಜೆಡಿಎಸ್‌ನ 3, ಮುನಿರತ್ನ ಸೇರಿ ಕಾಂಗ್ರೆಸ್ ಪಕ್ಷದ 14 ಶಾಸಕರು ಸೇರಿ ಒಟ್ಟು 17ಮಂದಿ ರಾಜೀನಾಮೆ ನೀಡಿದ್ದು, ಅವರೆಲ್ಲರನ್ನು ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿ ತೀರ್ಪು ನೀಡಿದ್ದರು ಆ ಬಳಿಕ ಕಾಂಗ್ರೆಸ್ ಪಕ್ಷ ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.