ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುತ್ತಿನ ನಗರಿ ಹೈದರಾಬಾದ್‍ನಲ್ಲಿರುವ ದೇವಸ್ಥಾನವೊಂದಕ್ಕೆ ಬಿಎಸ್‍ವೈ ಭೇಟಿ ನೀಡಿದ್ದು, ಇವರ ಜತೆ ಕೆಲವೇ ಕೆಲವು ಆಪ್ತರು ಮಾತ್ರ ಭಾಗವಹಿಸಲಿದ್ದಾರೆ.
ಇದು ಸಂಪೂರ್ಣವಾಗಿ ಖಾಸಗಿ ಕಾರ್ಯಕ್ರಮವಾಗಿದ್ದು, ಜ್ಯೋತಿಷಿಗಳ ಸಲಹೆ ಮೇರೆಗೆ ಯಡಿಯೂರಪ್ಪ ದೇವಸ್ಥಾನಕ್ಕೆ ತೆರಳಲಿದ್ದಾರೆ. ದೇವರ ದರ್ಶನ ಪಡೆದ ನಂತರ ಸಂಜೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ದೇವಸ್ಥಾನಕ್ಕೆ ಭೇಟಿ ನೀಡಿದರೆ ಕೆಲವು ಕಂಟಕಗಳು ನಿವಾರಣೆಯಾಗಲಿವೆ ಎಂದು ಬಿಎಸ್‍ವೈ ಆಪ್ತರೊಬ್ಬರು ಸೂಚಿಸಿರುವ ಹಿನ್ನೆಲೆಯಲ್ಲಿ ಹೈದರಬಾದ್‍ಗೆ ತೆರಳಲಿದ್ದಾರೆ.