ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಚರ್ಚಿಸಲು ನಾಳೆ ಸಂಜೆ ದೆಹಲಿಗೆ ತೆರಳಲಿದ್ದೇನೆ. ನಮ್ಮ ನಾಯಕರು ಸೂಚನೆ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು. ಅಲ್ಲಿಯವರೆಗೆ ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.
ಅನುದಾನ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಹೀಗೆ ಸೂಚನೆ ನೀಡಿಲ್ಲ. ಯೋಜನೆ ಅಡಿಯಲ್ಲಿ ಬೇಕಾಬಿಟ್ಟಿ ಹಣ ಖರ್ಚಾಗುತ್ತಿತ್ತು.ಹೀಗಾಗಿ ಅನುದಾನ ತಡೆಹಿಡಿಯಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.