ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು.
ಪದ್ಮನಾಭನಗರದ ಮನೆಗೆ ತೆರಳಿದ ಕುಮಾರಸ್ವಾಮಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ 17 ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾದರೆ ಪಕ್ಷ ಕೈಗೊಳ್ಳಬೇಕಾದ ನಿಲುವಿನ ಬಗ್ಗೆ ದೇವೇಗೌಡರೊಂದಿಗೆ ಚರ್ಚಿಸಿದರು.
ಉಪಚುನಾವಣೆ ಘೋಷಣೆಯಾದರೆ ಯಾವ ಕ್ಷೇತ್ರಗಳಿಗೆ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎನ್ನುವ ಬಗ್ಗೆಯು ಮತನಾಡಿದ್ದಾರೆ ಹಾಗು ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಯಾವ ತಂತ್ರ ಅನುಸರಿಸಬೇಕು ಹಾಗೂ ಪಕ್ಷ ಸಂಘಟನೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗೆಯೂ ಗಂಭೀರ ಸಮಾಲೋಚನೆ ನಡೆಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.