ದೆಹಲಿಗೆ ತೆರೆಯಲ್ಲಿ ತೆರಳಿದ್ದ ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಕೇಂದ್ರ ಸಚಿವರನ್ನು ಭೇಟಿಯಾಗಿ ಅವರು ಸಮಾಲೋಚನೆ ನಡೆಸಿ ರಾಜ್ಯಕ್ಕೆ ವಾಪಸ್ ಆಗಿದ್ದಾರೆ.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮೊದಲು ಪ್ರವಾಹಪೀಡಿತ ಪ್ರದೇಶಗಳಿಗೆ ತೆರಳಿ ಕ್ರಮಕೈಗೊಳ್ಳಿ. ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡೋಣ ಎಂದು ವರಿಷ್ಠರು ಸೂಚನೆ ನೀಡಿದ್ದು, ಅಂತೆಯೇ ಸಿಎಂ ನೆರೆ ಹಾನಿ ಪ್ರದೇಶಕ್ಕೆ ತೆರಳಿದ್ದಾರೆ.
ಸಂಸದರು, ಶಾಸಕರಿಗೆ ಅವರ ಕ್ಷೇತ್ರದಲ್ಲಿ ಇರಲು ಸೂಚನೆ ನೀಡಲಾಗಿದೆ. ಆಗಸ್ಟ್ 10 ಅಥವಾ 11 ರಂದು ದೆಹಲಿಗೆ ತೆರಳುತ್ತೇನೆ. 2 -3 ದಿನಗಳ ಕಾಲ ಬೆಳಗಾವಿಯಲ್ಲಿಯೇ ಉಳಿಯಲಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.