ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಹಾಮಳೆಯಿಂದ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ರಾಜ್ಯ ಸರ್ಕಾರವೇ ಮನೆ ನಿರ್ಮಾಣ ಸೇರಿದಂತೆ ಎಲ್ಲ ರೀತಿಯ ನೆರವು ನೀಡಲು ಸಿದ್ದವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಮುಂದೂಡಿ ಬೆಳಗಾವಿಗೆ ಭೇಟಿ ನೀಡಿದ ಯಡಿಯೂರಪ್ಪ ಅವರು ಪ್ರವಾಹದಿಂದಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿರುವುದು ತಮ್ಮ ಗಮನಕ್ಕೆ ಬಂದಿದೆ. ಸಂಕಷ್ಟಕ್ಕೊಳಗಾಗಿರುವ ಜನರಿಗೆ ಎಲ್ಲ ರೀತಿಯ ನೆರವು ನೀಡಲಾಗುವುದು. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.