ಕೆ.ಎಸ್. ಈಶ್ವರಪ್ಪ ಮತ್ತು ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಒಟ್ಟು 4 ತಂಡಗಳನ್ನು ರಚಿಸಿದ್ದು ಈ ತಂಡಗಳು ರಾಜ್ಯದೆಲ್ಲೆಡೆ ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದೇವೆ. ಆಸ್ತಿ, ಮನೆ ಕಳೆದುಕೊಂಡವರಿಗೆ ನೆರವು ನೀಡುತ್ತೇವೆ ಎಂದು ತಿಳಿಸಿದ್ದಾರೆ.
3 -4 ದಿನದಲ್ಲಿ ರೈತರಿಗೆ ಮೊದಲ ಕಂತಿನಲ್ಲಿ 2000 ರೂ. ನೀಡುತ್ತೇವೆ. ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿ ರೈತರಿಗೆ ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಹಣ ನೀಡಲಾಗುವುದು. ಎಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು .