ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸಲು ರಾಜ್ಯ, ಕೇಂದ್ರ ಸರ್ಕಾರ ಕ್ರಮಕೈಗೊಂಡಿವೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಅವರು 3 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅವರು ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11.30 ಕ್ಕೆ ಮಡಿಕೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಕೊಡಗು ಜಿಲ್ಲಾಧಿಕಾರಿ, ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಜೆ 4.30 ಕ್ಕೆ ಮಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.