ಕನ್ನಡ ಚಿತ್ರಗಳು ಹವಾ ಸೃಷ್ಠಿಸುತ್ತಿವೆ. ಕನ್ನಡ ಚಿತ್ರೋದ್ಯಮದತ್ತ ಇಂದು ಇಡೀ ಸಿನಿಮಾ ಉದ್ಯಮ ಮುಖಮಾಡಿದೆ. ಕೆಜಿಎಫ್ ಮತ್ತು ಇಂದಷ್ಟೇ ರಿಲೀಸ್ಆಗಿರುವ ಕುರುಕ್ಷೇತ್ರ ಸಿನಿಮಾಗಳು ವಿಶ್ವ ಮಟ್ಟದಲ್ಲಿ ಸದ್ದು ಮಾಡ್ತಾ ಇವೆ. ಇಂದು ಪ್ರತಿಷ್ಠಿತ 65ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿಯನ್ನು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ನವದೆಹಲಿಯಲ್ಲಿ ಪ್ರಕಟಿಸಿದರು.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಗೆ ಎರಡು ಪ್ರಶಸ್ತಿಗಳು, ಶ್ರುತಿ ಹರಿಹನ್ ಅಭಿನಯದ ನಾಚಿ ಚರಾಮಿಗೆ 5 ಸೇರಿದಂತೆ ಒಟ್ಟು 11 ಪ್ರಶಸ್ತಿಗಳು ಬಂದಿವೆ. ಇಷ್ಟೊಂದು ಪ್ರಶಸ್ತಿಗಳು ಬಂದಿರುವುದು ಇತಿಹಾಸದಲ್ಲೇ ಮೊದಲು.
ಒಟ್ಟಾರೆ ಪ್ರಶಸ್ತಿ ಪಟ್ಟಿ
* ಅತ್ಯುತ್ತಮ ಪ್ರಾದೇಶಿಕ ಚಿತ್ರ – ನಾತಿಚರಾಮಿ
* ಅತ್ಯುತ್ತಮ ಮಹಿಳಾ ಗಾಯಕಿ (ಮಾಯಾವಿ ಮಾನವೆ ಹಾಡು) (ಬಿಂಧು ಮಾಲಿನಿ ಗಾಯಕಿ) – ನಾತಿಚರಾಮಿ
* ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ – ನಾತಿಚರಾಮಿ
* ಅತ್ಯುತ್ತಮ ಸಂಕಲನ – ನಾತಿಚರಾಮಿ
* ಅತ್ಯುತ್ತಮ ಸಾಹಸ ಚಿತ್ರ – ಕೆಜಿಎಫ್
* ಅತ್ಯುತ್ತಮ ವಿಎಫ್ ಎಕ್ಸ್ ಚಿತ್ರ – ಕೆಜಿಎಫ್
* ಅತ್ಯುತ್ತಮ ಮಕ್ಕಳ ಚಿತ್ರ – ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೂಡು
* ಅತ್ಯುತ್ತಮ ರಾಷ್ಟ್ರೀಯ ಆಕ್ರ್ಸೂಸ್ ಚಿತ್ರ – ಮೂಕಜ್ಜಿಯ ಕನಸುಗಳು
* ನಾತಿಚರಾಮಿ ಚಿತ್ರದ ಅಭಿನಯಕ್ಕಾಗಿ ನಟಿ ಶೃತಿ ಹರಿಹರನ್ ಗೆ ವಿಶೇಷ ಪ್ರಶಸ್ತಿ
* ಅತ್ಯುತ್ತಮ ರಾಷ್ಟ್ರೀಯ ಏಕತಾ ಚಿತ್ರ – ಒಂದಲ್ಲ, ಎರಡಲ್ಲ
* ಅತ್ಯುತ್ತಮ ಬಾಲ ಕಲಾವಿದ – ಒಂದಲ್ಲ, ಎರಡಲ್ಲ