ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲ, ಸಹಕಾರ ನೀಡಲಿದೆ. ನೆರೆ ಸಂತ್ರಸ್ತರ ಪರಿಹಾರ ಕಾರ್ಯಕ್ಕೆ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು. ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಕೇಂದ್ರದಿಂದ ಹೆಚ್ಚಿನ ಪರಿಹಾರ ಪಡೆಯುವ ನಿಟ್ಟಿನಲ್ಲಿ ಕ್ರಮಕಕೈಗೊಳ್ಳಬೇಕೆಂದು ಹೇಳಿದ್ದಾರೆ.
ಸಂಕಷ್ಟದಲ್ಲಿರುವ ಜನತೆಗೆ ಒಳ್ಳೆಯದಾಗಬೇಕು.ಅದಕ್ಕಾಗಿ ನಾವು ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಅನಾರೋಗ್ಯದ ನಡುವೆಯೂ ಇಂದು ಬಾಗಲಕೋಟೆ ಸೇರಿದಂತೆ ವಿವಿಧೆಡೆ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.