ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಹೆಚ್ಚು ಸಿಗಬೇಕು ಎನ್ನುವುದೇ ನಮ್ಮ ಸರ್ಕಾರದ ಉದ್ದೇಶ . ಸರಕಾರದ ಹಲವು ಯೋಜನೆಗಳು ಕೂಡ ಈ ನಿಟ್ಟಿನಲ್ಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಕನ್ನಡಿಗರ ಭಾವನೆಗಳ ಮೇಲೆ ನಮಗೆ ಸದಾ ಗೌರವವಿದೆ .
ರಾಜ್ಯದ ಜನರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಭರವಸೆ ನೀಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರರಿಗೆ ಸಿಎಂ ಯಡಿಯೂರಪ್ಪನವರು ಟ್ವಿಟ್ಟರ್ ನ ಮೂಲಕ ಇಂದು ಬೆಳಿಗ್ಗೆ ತಿಳಿಸಿದ್ದಾರೆ.