ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿದ ಸಿಎಂ ಯಾರೂ ಆತಂಕಪಡುವ ಅಗತ್ಯವಿಲ್ಲ. ಸರ್ಕಾರದಿಂದ ಎಲ್ಲ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಮಂಗಳವಾರ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಅಗತ್ಯ ವಸ್ತುಗಳ ಖರೀದಿಗೆ ತಕ್ಷಣವೇ 10 ಸಾವಿರ ರೂ. ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ., ದುರಸ್ತಿಗೆ 1 ಲಕ್ಷ ರೂ. ನೀಡಲು ಸೂಚಿಸಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆಗೆ 50 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಶಿವಮೊಗ್ಗ ರಿಂಗ್ ರೋಡ್ ಮತ್ತು ವಿಮಾನ ನಿಲ್ದಾಣ ನಿರ್ಮಾಣಕ್ಕೆ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.