ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಸಹ ಸಂಸ್ಥಾಪಕರಾಗಿರುವ ಅಡ್ವಾಣಿ ಅವರಿಗೆ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿನ ಅವರ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಬೇಡವೆಂದು ನಿರ್ಧರಿಸಿ ಇದರ ಬಗ್ಗೆ ಬಿಜೆಪಿ ಸ್ಪಷ್ಟಪಡಿಸಿದೆ.
ಪ್ರತಿ ವರ್ಷವೂ ಸಹ ಆಡ್ವಾಣಿಯವರ ಮನೆಯಲ್ಲಿ ಧ್ವಜಾರೋಹಣ ನಡೆಸುತ್ತಿದ್ದರೂ ಆದರೆ ಅವರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ ಅದನ್ನು ಹರಿದು ಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ . ಸುಷ್ಮಾ ಸ್ವರಾಜ್ ಅವರ ಅಂತಿಮ ದರ್ಶನ ಪಡೆದುಕೊಂಡು ಬಂದ ಆಡ್ವಾಣಿಯವರು ನಂತರ ಆರೋಗ್ಯ ಅವರಿಗೆ ಎದುರಾಗಿತ್ತು ಎಂದು ಹೇಳಲಾಗುತ್ತಿದೆ . ಆದರೆ ಯಾವುದೇ ಭಯ ಪಡುವ ಅಗತ್ಯವಿಲ್ಲ ಜ್ವರ ಇರುವುದರಿಂದ ಸ್ವಲ್ಪ ಕಾಲ ವಿಶ್ರಾಂತಿ ಪಡೆಯಬೇಕು ಎಂದು ಬಿಜೆಪಿ ಸ್ಪಷ್ಟಪಡಿಸಿದೆ .