ದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಷಾ ಜೊತೆ ಮಾತುಕತೆ ನಡೆಸಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಚಿವ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ದಪಡಿಸಿ ಅಮಿತ್ ಷಾ ಅವರ ಅನುಮತಿಗೆ ಕಾಯುತ್ತಿದ್ದಾರೆ.
ನಿನ್ನೆ ತಡರಾತ್ರಿಯೇ ಯಡಿಯೂರಪ್ಪ ಮತ್ತು ಸಂತೋಷ್ ಮಾತುಕತೆ ನಡೆಸಿ ಮೊದಲ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ನಾಳೆ ಸಚಿವ ಸಂಪುಟ ವಿಸ್ತರಣೆ ಆಗೋದು ಫೈನಲ್ ಆಗಿದೆ ಎನ್ನಲಾಗ್ತಿದೆ .