ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸತತ 5 ಬಾರಿ ಗೆದ್ದು ದಾಖಲೆ ನಿರ್ಮಿಸಿರುವ ಹಾಗೂ ಈ ಭಾಗದ ಕುಂದಾಪುರದ ವಾಜಪೇಯಿ ಎಂದೇ ಖ್ಯಾತಿ ಹೊಂದಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಹಿರಿತನವನ್ನು ಪರಿಗಣಿಸದಿರುವುದು ಇಡೀ ಬಂಟ ಸಮುದಾಯಕ್ಕೆ ಮಾಡಿದ ಅವಮಾನ ಎಂದು ದೂರಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಕಾಸರಗೋಡು, ಕೇರಳ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಬಂಟ ಸಮುದಾಯವು ತಮ್ಮದೇ ಆದ ಛಾಪು ಮೂಡಿಸಿದೆ.ಹಾಲಾಡಿ ಶ್ರೀನಿವಾಸಶೆಟ್ಟಿ ಅವರು ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡವರು. ಎಂದಿಗೂ ಪಕ್ಷವಿರೋಧಿ ಚಟುವಟಿಕೆ ನಡೆಸಿದವರಲ್ಲ. ಪಕ್ಷದ ಶಿಸ್ತನ್ನು ಉಲ್ಲಂಘಿಸಿದವರಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುತ್ತಾರೆಂಬ ನಿರೀಕ್ಷೆ ಇತ್ತು. ಯಾವ ಕಾರಣಕ್ಕಾಗಿ ಮಂತ್ರಿ ಸ್ಥಾನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.