ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ಅವರ ಕಾರು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಇದರಿಂದ ರಾಮದಾಸ್ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸುಳ್ಯದ ಜಾಲ್ಲೂರಿನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮದಾಸ್ ಅವರಿಗೆ ಯಾವುದೇ ಅಪಘಾತ ವಾಗದೆ ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗುತ್ತಿದೆ .